ಹಸಿರು ದಳ ಸಂಸ್ಥೆಯು ಕಳೆದ 2009-10ನೇ ಸಾಲಿನಲ್ಲಿ ರಾಜ್ಯ ಮತ್ತು ಅಂತಾರಾಷ್ಟೀಯ ಮಟ್ಟದಲ್ಲಿ ಘನತ್ಯಾಜ್ಯ ನಿರ್ವಹಣೆ ಹಾಗೂ ನಿಯಮಾವಳಿಗಳು(SWM) ಹಾಗೂ ಪರಿಸರಕ್ಕೆ ಸಂಬಂಧಿಸಿದಂತೆ ಸರ್ಕಾರ ಹಾಗೂ ಸಂಘ ಸಂಸ್ಥೆಯ ಅಧಿಕಾರಿಗಳಿಗೆ ಸಾಕಷ್ಟು ತರಬೇತಿಗಳನ್ನು ನೀಡುವುದರ ಮುಖಾಂತರ ರಾಜ್ಯ ರಾಷ್ಟ್ರ ಹಾಗೂ ಅಂತಾರಾಷ್ಟೀಯ ಮಟ್ಟದಲ್ಲಿ ಹಸಿರು ದಳ ಸಂಸ್ಥೆಯು ಗುರುತಿಸಿಕೊಂಡಿದೆ.
ತ್ಯಾಜ್ಯ ಶ್ರಮೀಕರು ಘನತ್ಯಾಜ್ಯ ನಿರ್ವಹಣೆ, ಸುರಕ್ಷಿತ ಪರಿಸರ, ಹಾಗೂ ಜವಾಬ್ದಾರಿಯುತ ರೀತಿಯಲ್ಲಿ ತ್ಯಾಜ್ಯವನ್ನು ಸಂಗ್ರಹಿಸುವುದು, ಸಂಸ್ಕರಿಸುವುದು ಮತ್ತು ವಿಲೇವಾರಿ ಮಾಡುವುದರ ಮುಖಾಂತರ ಮೌನ ಪರಿಸರವಾದಿಗಳಿಗೆ ತಮ್ಮ ವೃತ್ತಿಯಿಂದ ಜೀವರಾಶಿಗಳ ಆರೋಗ್ಯ ಮತ್ತು ಪರಿಸರದ ಮೇಲೆ ತ್ಯಾಜ್ಯದ ಪರಿಣಾಮವನ್ನು ಕಡಿಮೆ ಆಗುವುದು ಮತ್ತು ಘನತ್ಯಾಜ್ಯ ನಿರ್ವಹಣೆ ನಿಯಮವಳಿಗಳ ಕಾನೂನಿನ ಬಗ್ಗೆ ಅರಿವು ಮೂಡಿಸಿ ಜ್ಞಾನ ಮತ್ತು ಕೌಶಲ್ಯದ ಮುಖಾಂತರ ಸದೃಢಗೊಂಡು ತ್ಯಾಜ್ಯ ಶ್ರಮಿಕರು ತಮ್ಮ ಸಂಘದ ಮುಖಾಂತರ ಅವರ ಹಕ್ಕುಗಳಿಗಾಗಿ ಹೋರಾಟ ಮಾಡುವ ಮನೋಭಾವ ಬೆಳೆಸಿಕೊಂಡು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.